ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಸುನಿಲ ಘನವಟ ಇವರಿಂದ ಮುಖ್ಯಮಂತ್ರಿಯವರ ಭೇಟಿ
ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ರಾಜ್ಯ ಸಂಘಟಕ ಶ್ರೀ. ಸುನೀಲ ಘನವಟ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ
ಮುಂಬಯಿ, 19 ಜುಲೈ (ಸುದ್ದಿ.) – ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ರಾಜ್ಯ ಸಂಘಟಕ ಶ್ರೀ. ಸುನೀಲ ಘನವಟ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿಮಾಡಿ ಪಂಢರಪುರದಲ್ಲಿ ನಡೆದ ವಾರಕರಿ ಮಹಾಅಧಿವೇಶನದ ಕುರಿತು, ಎಲ್ಲಾ ತೀರ್ಥಕ್ಷೇತ್ರಗಳಲ್ಲಿ ಮದ್ಯ ಮತ್ತು ಮಾಂಸ ಮುಕ್ತಗೊಳಿಸಲು ಹಾಗೂ ದೇವಾಲಯದ ಕಾರ್ಯದರ್ಶಿಗಳು ಮತ್ತು ಕೋಟೆಗಳ ಬಗ್ಗೆ ಕಾಳಜಿ ವಹಿಸುವ ಸಂಘಟನೆಗಳ ಸಭೆಯನ್ನು ಆಯೋಜಿಸುವಂತೆ ಮುಖ್ಯಮಂತ್ರಿಯವರನ್ನು ಕೇಳಿದರು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ಇವರು, ಅಧಿವೇಶನ ಮುಗಿದ ಕೂಡಲೇ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದ್ದಾರೆ.