ಹೊಸಪೇಟೆ : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ ೨೧೧ ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಸಂಘ ನಿರ್ಧರಿಸಿದೆ ಎಂದು ಗುರುಪ್ರಸಾದ ಗೌಡ ತಿಳಿಸಿದರು ಅವರು ನಗರದ ಪಂಚಮುಖಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆಯ ಫ್ಲೆಕ್ಸ್ ಅನಾವರಣಗೊಳಿಸಿ ಮಾತನಾಡುತ್ತಿದ್ದರು.
ಮುಂದೆ ಮಾತಮಾಡುತ್ತಾ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವುದಕ್ಕಾಗಿ ವ್ಯಾಪಕ ಅಭಿಯಾನ ನಡೆಸಿ ಭಕ್ತರಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಭಾರತೀಯ ಸಾತ್ವಿಕ ಉಡುಪುಗಳು : ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್‌ಗಳನ್ನು ಹಾಕಬೇಕು.
ಆಧುನಿಕ ಅಸಾತ್ವಿಕ ಉಡುಪುಗಳು : ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ವಿನಂತಿಸುತ್ತೇವೆ.
ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿಯ ಅಧ್ಯಕ್ಷರು, ಅರ್ಚಕರು, ಧರ್ಮಪ್ರೇಮಿಗಳಾದ ಶ್ರೀ.ನರಪತ್ ಸಿಂಗ್ ರಾಜಪೂತ್, ರೇವಣಸಿದ್ದಯ್ಯ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ಮಲ್ಲಿಕಾರ್ಜುನ ಹೀರೆಗೌಡರ ಮತ್ತು ಇತರರು ಉಪಸ್ಥಿತರಿದ್ದರು.