Menu Close

‘ವ್ಯಾಲೆಂಟೈನ್ ಡೇ’ ಯಂತಹ ಪಾಶ್ಚಾತ್ಯ ಸಂಸ್ಕೃತಿಯನ್ನು ಬಹಿಷ್ಕರಿಸಿ ಭಾರತೀಯ ಸಂಸ್ಕೃತಿಯ ರಕ್ಷಣೆ ಮಾಡಿ !

ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಜಾಗೃತಿ ಅಭಿಯಾನ

ಬೆಂಗಳೂರು : ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ೧೪ ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದ್ದು ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದೆ. ಹಾಗಾಗಿ ಈ ಬಗ್ಗೆ ಯುವಕ ಯುವತಿಯರಲ್ಲಿ ಜಾಗೃತಿ ಮೂಡಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಚಿಂತಾಮಣಿ ಸೇರಿದಂತೆ ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಬೋಧನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತೆ ಸೌ. ರಚನಾ ಪ್ರಶಾಂತ್ ಮಾತನಾಡಿ, ದೇಶದಲ್ಲಿ ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ವ್ಯವಹಾರಿಕ ಲಾಭಗಳಿಸುವ ಉದ್ದೇಶದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇದದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ದೂಮಪಾನ ಮಾಡುವುದು, ಡ್ರಗ್ ಮಾಫಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ. ಅಷ್ಟೇಅಲ್ಲದೇ ಈ ದಿನ ಸಮೀಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕವಾಗುತ್ತಿರುವುದು, ಅನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ. ಈ ವ್ಯಾಲೆಂಟೈನ್ ದಿನದ ಕಾರಣ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತವರಣ ಹಾಳಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಫೆಬ್ರವರಿ ೧೪ ರಂದು ಮಾತೃ-ಪಿತೃ ಪೂಜನೀಯ ದಿನವಾಗಿ ಆಚರಿಸುವಂತೆ ಯುವಕ ಯುವತಿಯರಲ್ಲಿ ಜಾಗೃತಿ ಮೂಡಿಸಬೇಕಿದೆ’ ಎಂದು ಹೇಳಿದರು.

Related News