Menu Close

ಕರ್ನಾಟಕ ದೇವಸ್ಥಾನ ಮಹಾಸಂಘದಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ !

ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ(ತಿದ್ದುಪಡಿ) ವಿಧೇಯಕ 2024 ರದ್ದುಗೊಳಿಸಿ !

ಮನವಿ ನೀಡುತ್ತಿರುವ ದೇವಸ್ಥಾನದ ವಿಶ್ವಸ್ಥರು

ಶಿವಮೊಗ್ಗ : ಕರ್ನಾಟಕ ಸರಕಾರವು ದಿನಾಂಕ 20 ಫೆಬ್ರವರಿಯಂದು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಆಧಿನಿಯಮ 1997 ಗೆ ಮತ್ತಷ್ಟು ತಿದ್ದುಪಡಿಯನ್ನು ಮಾಡಿದೆ. ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳು ಇದ್ದು, ಅವುಗಳು ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ದೇವಸ್ಥಾನ ಮಹಾಸಂಘದಿಂದ ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಅಂಬಾಭವಾನಿ ದೇವಸ್ಥಾನ ಮಿಳಳಘಟ್ಟದ ಬಿ. ಕೆ. ಷಡಕ್ಷ ರಾಜು, ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದ ಶ್ರೀ. ಕೃಷ್ಣಮೂರ್ತಿ, ದುರ್ಗಿಗುಡಿಯ ಶ್ರೀ ಸುಬ್ರಮಣ್ಯ ಸೇವಾ ಟ್ರಸ್ಟಿನ ಉಪಾಧ್ಯಕ್ಷರಾದ ಶ್ರೀ. ದಿನೇಶ್ ಚೌಹಾಣ್, ಶಿವಮೊಗ್ಗ ನಗರ ಕೆ ಆರ್ ಪುರಂ ಶ್ರೀ ರಾಮ ಮಂದಿರದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ. ಕೃಷ್ಣಪ್ಪ, ಶನೇಶ್ವರ ದೇವಸ್ಥಾನ ಟ್ರಸ್ಟನ ಪರಿಸರ ರಮೇಶ್, ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ವಿಜಯ ರೇವಣಕರ್ ಸೇರಿದಂತೆ ಇನ್ನೂ ಅನೇಕ ದೇವಸ್ಥಾನಗಳ ವಿಶ್ವಸ್ಥರು ಹಾಗೂ ಅರ್ಚಕರು ಉಪಸ್ಥಿತರಿದ್ದರು.

ಈ ವೇಳೆ ಶ್ರೀ. ವಿಜಯ ರೇವಣಕರ ಮಾತನಾಡಿ ಕಲಂ ೬೯ ಇ ನಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳೂ ಸಹ ದೇವಸ್ಥಾನ ಸಮಿತಿಯ ಸದಸ್ಯರಾಗಬಹುದು ಎಂಬ ನಿಯಮ ಮಾಡಲಾಗಿದೆ. ಇದರಲ್ಲಿ ಹಿಂದೂಗಳಲ್ಲದವರು ಸೇರುವ ಸಾಧ್ಯತೆ ಇರುವ ಕಾರಣ ಈ ನಿಯಮ ಅತ್ಯಂತ ಅಪಾಯಕಾರಿಯಾಗಿದೆ ಮತ್ತು ಅಲ್ಲಿಯೂ ಭ್ರಷ್ಟಚಾರ ನಡೆಯುವ ಸಾಧ್ಯತೆ ಇದೆ. ಜೊತೆಗೆ ಕಲಂ ೧೯ ರಲ್ಲಿ ಸಾಮಾನ್ಯ ಸಂಗ್ರಹಣ ನಿಧಿಯ ಉಲ್ಲೇಖ ಮಾಡಲಾಗಿದ್ದು ನಿಧಿಯನ್ನು ಇತರ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ನೀಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನ್ಯಮತೀಯರಿಗೂ ಅನ್ವಯ ಮಾಡುವ ಸಾದ್ಯತೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ದೇವಾಲಯದ ನಿಧಿ ಅನ್ಯ ಸಮುದಾಯದವರ ಪಾಲಗಬಹುದು. ಇನ್ನು ಕಲಂ ೨೫ ರಲ್ಲಿ ಸಂಯೋಜಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ರಚನೆ ಸಂದರ್ಭದಲ್ಲಿ ಹಿಂದೂಗಳಲ್ಲದವರನ್ನು ನೇಮಕ ಮಾಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ.ಇದು ದೇವಸ್ಥಾನಗಳ ಪರಂಪರೆ ರಕ್ಷಣೆಯ ವಿಷಯದಲ್ಲಿ ಅತ್ಯಂತ ಅಪಾಯಕಾರಿಯಾಗಿದೆ ಎಂದರು. ಈ ಎಲ್ಲ ಕಲಂಗಳು ದೇವಸ್ಥಾನಗಳ ಸಂರಕ್ಷಣೆ ದೃಷ್ಟಿಯಿಂದ ಅತ್ಯಂತ ಮಾರಕವಿರುವುದರಿಂದ ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಈ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಜಿಲ್ಲಾಡಳಿತದ ಮೂಲಕ ರಾಜ್ಯ ಪಾಲರಿಗೆ ಮನವಿ ಮಾಡಲಾಗಿದೆ.

Related News